ʼಸ್ಪೆಷಲ್ ಜ್ಯೂರಿ ಅವಾರ್ಡ್ʼ ಶಂಕರ್‌ ನಾಗ್‌ ಅವರಿಗೆ ಅರ್ಪಿಸಿ ಕಾರಣ ತಿಳಿಸಿದ ರಿಷಬ್‌

ರಿಷಬ್‌ ಶೆಟ್ಟಿ ಅವರಿಗೆ 4ನೇ ಇಂಟರ್​​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ “ಸ್ಪೆಷಲ್ ಜ್ಯೂರಿ ಅವಾರ್ಡ್” ದೊರಕಿದೆ. ಈ ಅವಾರ್ಡ್‌ ಅನ್ನು ಅವರು ಶಂಕರ್‌ ನಾಗ್‌ ಅವರಿಗೆ ಅರ್ಪಿಸಿದ್ದಾರೆ. ಈ ಕುರಿತು ಅಭಿಮಾನಿಗಳಿಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ.

’54ನೇ ಇಂಟರ್​​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ಸ್ಪೆಷಲ್ ಜ್ಯೂರಿ ಅವಾರ್ಡ್ ದೊರಕಿದೆ. ಇದು ಎಂದೂ ಮರೆಯಲಾಗದ ಕ್ಷಣಗಳಲ್ಲಿ ಉಳಿದುಕೊಳ್ಳುತ್ತದೆ. ನನ್ನ ಸ್ಫೂರ್ತಿಯಾದ ಶಂಕರ್ ನಾಗ್ ಅರವರಿಗೆ 1979ರಲ್ಲಿ ‘ಒಂದಾನೊಂದು ಕಾಲದಲ್ಲಿ’ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ದೊರಕಿತ್ತು. ಅವರು ತೋರಿಸಿರುವ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ನನಗೆ ಇಂದು ಈ ಅವಾರ್ಡ್ ದೊರೆತದ್ದು ಅತ್ಯಂತ ಸಂತಸ ನೀಡಿದೆ’ ಎಂದು ಪತ್ರ ಆರಂಭಿಸಿದ್ದಾರೆ ರಿಷಬ್ ಶೆಟ್ಟಿ.

‘ಕಾಂತಾರವನ್ನು ನೋಡಿ ಕನ್ನಡಿಗರು ಬೆಂಬಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದೀರಿ. ಇದೀಗ ಕಾಂತಾರ ಒಂದನೇ ಅಧ್ಯಾಯಕ್ಕೆ ಸಿಗುತ್ತಿರುವ ಅಭೂತಪೂರ್ವ ಪ್ರಶಂಸೆ ಮತ್ತು ಬೆಂಬಲ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮತ್ತೊಮ್ಮೆ ಉತ್ತಮವಾದ ಚಿತ್ರವನ್ನು ನೀಡಲು ಶ್ರಮಿಸುತ್ತೇನೆ. ಈ ನನ್ನ ಎಲ್ಲ ಪ್ರಯತ್ನ ಹಾಗೂ ಯಶಸ್ಸಿಗೆ ಕಾರಣರಾದ ಪ್ರೀತಿಯ ಕನ್ನಡಿಗರಿಗೆ ನಾನು ಸದಾ ಆಭಾರಿ. ಈ ಪ್ರಶಸ್ತಿಯನ್ನು ನಾನು ಶಂಕರ್ ನಾಗ್ ಅವರಿಗೆ ಅರ್ಪಿಸುತ್ತಿದ್ದೇನೆ’ ಎಂದಿದ್ದಾರೆ.

Font Awesome Icons

Leave a Reply

Your email address will not be published. Required fields are marked *