ಬೆಂಗಳೂರು: ಪರೀಕ್ಷಾರ್ಥಿಗಳು ಕಾತರದಿಂದ ಕಾಯುತ್ತಿದ್ದ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಈ ಹಿನ್ನಲೆ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಇನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಬರೆಯಲು 66,990 ಅರ್ಹರಾಗಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಪರೀಕ್ಷಾರ್ಥಿಗಳು ಅರ್ಧ ಗಂಟೆ ಮೊದಲೇ ಕೇಂದ್ರದೊಳಗೆ ಇರಬೇಕು. ಒಮ್ಮೆ ಒಳಗೆ ಹೋದರೆ ಪರೀಕ್ಷೆ ಮುಗಿದ ನಂತರವೇ ಹೊರಬರಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.