ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳ : ಡಾ. ಎಂ.ಸಿ.ಸುಧಾಕರ್

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಶುಕ್ರವಾರ ವಿಕಾಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕಳೆದ ಒಂದು ತಿಂಗಳಿಂದಲೂ ಮುಷ್ಕರ ನಡೆಸುತ್ತಿರುವ ರಾಜ್ಯ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಹೊಸ ವರ್ಷದ ಗಿಫ್ಟ್ ಕೊಟ್ಟಿದೆ.

ಅತಿಥಿ ಉಪನ್ಯಾಸಕರ ಬೇಡಿಕೆಯಲ್ಲಿ ಸೇವೆ ಕಾಯಂ ಬಹುಮುಖ್ಯ ಬೇಡಿಕೆಯಾಗಿದೆ. ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ. ಇದರ ನಡುವೆ ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ತಿಂಗಳಿಗೆ ಒಂದು ರಜೆ ನೀಡಲಾಗುವುದು. 60 ವರ್ಷ ಪೂರೈಸಿದಂತಹ ಅತಿಥಿ ಉಪನ್ಯಾಸಕರಿಗೆ ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

Font Awesome Icons

Leave a Reply

Your email address will not be published. Required fields are marked *