ಮುಂಬೈ: ನಟ ಶಾರುಖ್ ಖಾನ್ ಅಭಿನಯದ ‘ಜವಾನ್’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ವಿಶ್ವಾದ್ಯಂತ ಸಾವಿರಾರು ಪರದೆಗಳಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿದ ಅಭಿಮಾನಿಗಳು ಎಂಜಾಯ್ ಮಾಡುತ್ತಿದ್ದಾರೆ.
ಶಾರುಖ್ ಖಾನ್ ಜೊತೆ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದವರು ನಟಿಸಿದ್ದಾರೆ. ಬಹುತಾರಾಂಗಣದ ಈ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ಈ ಚಿತ್ರ ಸಿದ್ಧವಾಗಿದೆ.
ಇನ್ನು ಇತ್ತಿಚೇಗಷ್ಟೇ ಮೂರು ಭಾಷೆಗಳ ಪೋಸ್ಟರ್ ಅನ್ನು ಶಾರುಖ್ ಖಾನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದರು. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಜವಾನ್ ಬರುತ್ತಿದ್ದರೆ ಕನ್ನಡದಲ್ಲಿ ಏಕಿಲ್ಲ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಕನ್ನಡದಲ್ಲಿ ಜವಾನ್ ಬಂದರೆ ಮಾತ್ರ ನೋಡುತ್ತೇವೆ ಎಂದು ಹಲವರು ಶಾರುಖ್ ಗೆ ಪ್ರಶ್ನೆ ಕೂಡ ಮಾಡಿದ್ದರು.