“ಅಮ್ಮನ ನೀಡಿದ ಉಡುಗೊರೆ, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ”: ಜಗ್ಗೇಶ್ ಭಾವುಕ ಪೋಸ್ಟ್

ಬೆಂಗಳೂರು: ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ವರ್ತೂರು ಸಂತೋಷ್ ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ಸೆಲೆಬ್ರಿಟಿಗಳ ಕತ್ತಿನಲ್ಲಿ ಹುಲಿ ಉಗುರಿನ ಲಾಕೆಟ್ ಇರುವ ಫೋಟೋ ವೈರಲ್ ಆಯಿತು. ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಹುಲಿ ಉಗುರು ಹೊಂದಿರುವ ಲಾಕೆಟ್‌ ಜಗ್ಗೇಶ್‌ ಬಳಿಯು ಇದ್ದ ಕಾರಣ ಅರಣ್ಯ ಅಧಿಕಾರಿಗಳು ಅವರ ಮನೆಗೂ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಜಗ್ಗೇಶ್ ಅವರು ಲಾಕೆಟ್​ ಅನ್ನು ಅರಣ್ಯಾಧಿಕಾರಿಗಳಿಗೆ ನೀಡಿದ್ದಾರೆ.

‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ, ಪಾಚ್ಕೊಳಿ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ, ‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ’ ಎಂದು ಅವರು ಬರೆದಿದ್ದಾರೆ.

Font Awesome Icons

Leave a Reply

Your email address will not be published. Required fields are marked *