ಅಯೋಧ್ಯೆಗೆ ತಲುಪಿತು 2,400 ಕೆ.ಜಿಯ ಘಂಟೆ

ಲಕ್ನೋ: ರಾಮಜನ್ಮಭೂಮಿಯಲ್ಲಿ ರಾಮಮಂದಿರ ಉದ್ಘಾಟನೆ ಜ22ರಂದು ನಡೆಯಲಿದೆ. ದೇಶದ ಎಲ್ಲಾ ಕಡೆಯಿಂದ ಅಯೋಧ್ಯೆಗೆ ಸಾಕಷ್ಟು ಕೊಡುಗೆಗಳು ಬಂದಿವೆ. ಅವುಗಳಲ್ಲಿ ದೇಶದ ಅತೀ ಗೊಡ್ಡ ಘಂಟೆಯೂ ಆಯೋಧ್ಯಗೆ ತಲುಪಿದೆ.

ಹೌದು. 2,400 ಕೆ.ಜಿ ತೂಕದ ಬೃಹತ್ ಘಂಟೆ ಎಟಾಹ್ ಜಿಲ್ಲೆಯ ಜಲೇಸರ್ ಪಟ್ಟಣದಿಂದ ಈಗಾಗಲೇ ಅಯೋಧ್ಯೆ ತಲುಪಿದೆ. ಜಿಲ್ಲೆಯ ಉಪವಿಭಾಗಗಳಲ್ಲಿ ವಾಹನದ ಮೇಲೆ ಈ ಬೃಹತ್‌ ಘಂಟೆಯನ್ನು ಪ್ರದರ್ಶಿಸಿದ ನಂತರ ರೈಲಿನ ಮೂಲಕ ಸಾಗಿಸಲಾಗಿದ್ದು, ಅಯೋಧ್ಯೆಗೆ ತಲುಪಿದೆ.

ಸುಮಾರು 30 ಕಾರ್ಮಿಕರ ತಂಡದಿಂದ ಈ ಘಂಟೆ ತಯಾರಾಗಿದೆ. ಚಿನ್ನ, ಬೆಳ್ಳಿ, ತಾಮ್ರ, ಸತು, ಸೀಸ, ತವರ, ಕಬ್ಬಿಣ ಮತ್ತು ಪಾದರಸ ಹೀಗೆ ಒಟ್ಟು 8 ಲೋಹಗಳಿಂದ ತಯಾರಿಸಲಾಗಿದೆ. ಘಂಟೆಯ ಅಗಲ 15 ಅಡಿ ಮತ್ತು ಒಳಭಾಗದ ಅಗಲ 5 ಅಡಿ ಇದ್ದು, ಇದನ್ನು ತಯಾರಿಸಲು ಒಂದು ವರ್ಷ ಬೇಕಾಗಿದೆ.

Font Awesome Icons

Leave a Reply

Your email address will not be published. Required fields are marked *