ಅಯೋಧ್ಯೆ ರಾಮ ಮಂದಿರಕ್ಕೆ ಬೃಹದಾಕಾರದ “ಅಳಿಲು ಪುತ್ಥಳಿ” ನೀಡಿದ ನಾಗಸಂದ್ರದ ಮಾಲೀಕ

ಬೆಂಗಳೂರು: ಅಯೋಧ್ಯೆ ರಾಮಮಂದಿರದ ಉದ್ಘಾಟನೆಗೆ ಬೆಂಗಳೂರಿನ ನಾಗಸಂದ್ರದ ಮಾಲೀಕರು ನಿರ್ಮಿಸಿರುವ ಬೃಹದಾಕಾರದ ಅಳಿಲು ಪುತ್ಥಳಿ ಮೂರ್ತಿಯನ್ನು ನೀಡಲಿದ್ದಾರೆ.

ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಪ್ರಸಿದ್ಧಿ ಇಂಜಿನಿಯರ್ಸ್ ಕಂಪೆನಿಯ ಮಾಲೀಕರಾದ ಸಿ ಪ್ರಕಾಶ್ ಅವರು ಎರಡೂವರೆ ಟನ್ ಕಾರ್ಟನ್ ಸ್ಟೀಲ್ ಬಳಸಿ, 15 ಅಡಿ ಎತ್ತರ ಹಾಗೂ 7.5 ಅಡಿ ಅಗಲ ವಿಸ್ತೀರ್ಣದಲ್ಲಿ ಬೃಹದಾಕಾರದ ಅಳಿಲು ಪುತ್ಥಳಿ ಅಯೋಧ್ಯೆಯ ರೈಲ್ವೆ ನಿಲ್ದಾಣ ಆವರಣದ ಮಧ್ಯ ಭಾಗದಲ್ಲಿ ಜ.12ರಂದು ಅನಾವರಣಗೊಳ್ಳಲಿದೆ.

ಈ ಪುತ್ಥಳಿ ನಿರ್ಮಾಣಕ್ಕೆ ಕಾರ್ಟನ್ ಸ್ಟೀಲ್ ಬಳಸಿದ್ದು ಇದರಲ್ಲಿ ತಾಮ್ರದ ಮಿಶ್ರಣ ಇರುವುದರಿಂದ 100 ವರ್ಷಗಳಾದರೂ ಸಹ ಪುತ್ಥಳಿ ಯಾವುದೇ ರೀತಿ ಹಾನಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *