ಅಯೋವಾ ಶಾಲೆಯಲ್ಲಿ ಗುಂಡಿನ ದಾಳಿ: ಓರ್ವ ವಿದ್ಯಾರ್ಥಿ ಸಾವು, ಐವರಿಗೆ ಗಾಯ

ಪೆರ್ರಿ, ಅಯೋವಾ: ಗುಂಡಿನ ದಾಳಿಗೆ ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಐವರು ಗಾಯಗೊಂಡ ಘಟನೆ ಅಮೆರಿಕದ ಅಯೋವಾ ನಗರದ ಶಾಲೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಈ ಕೃತ್ಯದ ಬಳಿಕ ಆರೋಪಿ 17 ವರ್ಷದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಜಾರಿ ಅಧಿಕಾರಿಗಳು, ಶಾಲೆಗೆ ನುಗ್ಗಿದ ಯುವಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಐವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ಪೆರ್ರಿ ಹೈಸ್ಕೂಲ್‌ನ ವಿದ್ಯಾರ್ಥಿ ಡೈಲನ್ ಬಟ್ಲರ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *