ಅರಣ್ಯ ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ; ಕೊನೆಗೂ ಬಲೆಗೆ ಬಿದ್ದ ಗಂಡು ಚಿರತೆ

ನಂಜನಗೂಡು: ತಾಲ್ಲೂಕಿನ ಸೂರಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬಲೆಗೆ ಕೊನೆಗೂ ಗಂಡು ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಗ್ರಾಮದ ಮಹೇಶ್ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗಾಗಿ ನಂಜನಗೂಡು ಅರಣ್ಯ ಇಲಾಖೆಯ ಅಧಿಕಾರಿಗಳು ಬಲೆ ಇಟ್ಟಿದ್ದರು. ಪ್ರತಿದಿನ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ಮಾಡುತ್ತಿದ್ದರು. ಇಂದು ಬುಧವಾರ ಸಂಜೆ 4 ಗಂಟೆಯ ಸಮಯದಲ್ಲಿ ಬಲೆಗೆ ಚಿರತೆ ಸಿಲುಕಿಕೊಂಡಿದೆ. ಗ್ರಾಮಸ್ಥರ ಮಾಹಿತಿಯ ಮೇಲೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಸುಮಾರು ಮೂರರಿಂದ ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು, ಚಿರತೆಯನ್ನು ಬೋನಿಗೆ ರವಾನಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ. ಈ ಭಾಗದಲ್ಲಿ ಸಾಕಷ್ಟು ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಾ ಗ್ರಾಮಸ್ಥರನ್ನು ಬೆಚ್ಚಿ ಬೆಳಿಸಿದ ಚಿರತೆಯನ್ನು ಸೆರೆ ಹಿಡಿಯುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

ಕಾರ್ಯಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ನಿತಿನ್ ಕುಮಾರ್, ಗಸ್ತು ಅರಣ್ಯಪಾಲಕರಾದ ಶರತ್, ವೈಶಾಕ್, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಮಂಜುನಾಥ್, ಸುನೀಲ್, ಡ್ರೈವರ್ ನಾಗಣ್ಣ ಭಾಗವಹಿಸಿದ್ದರು.

Font Awesome Icons

Leave a Reply

Your email address will not be published. Required fields are marked *