ಅಶೋಕ್ ನೇತೃತ್ವದ ಪ್ರತಿಭಟನೆಯಲ್ಲಿ ಸಿಎಂ ನಿಂದನೆ: 42 ಮಂದಿ ವಿರುದ್ಧ ಎಫ್‌ಐಆರ್

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಕಳೆದ ಎರಡ್ಮೂರು ದಿನಗಳಿಂದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಅಂತೆಯೇ ಆರ್.ಅಶೋಕ್ ನೇತೃತ್ವದಲ್ಲಿ ಹಬ್ಬಳ್ಳಿಯಲ್ಲಿ ಜನವರಿ 3 ರಂದು ಬೃಹತ್ ಪ್ರತಿಭಟನೆ ನಡೆದಿತ್ತು.

ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಘೋಷಣೆ, ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿಯ 42 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಧಾರವಾಡ ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಪಾಲಿಕೆ‌ ವಿಪಕ್ಷ ನಾಯಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ‌ ನಿಂದಿಸಿದ ಆರೋಪ‌ ಇದೆ.

ಭಾಷಣದ ವೇಳೆ ‘ಸಿದ್ದರಾಮಯ್ಯ ಅಲ್ಲ, ಸಿದ್ದು ಮುಲ್ಲಾ’, ‘ಸಿದ್ದರಾಮಯ್ಯ ಲುಚ್ಚಾ’ ಎಂಬ ಪದ ಬಳಕೆ ಮಾಡಿ ಬಿಜೆಪಿಗರು ಘೋಷಣೆ ಕೂಗಿದ್ದಾರೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯ ಮಾನಹಾನಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

 

Font Awesome Icons

Leave a Reply

Your email address will not be published. Required fields are marked *