ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್ ಕೊಟ್ಟ ಸೀತಾರಾಮನ್

ದೆಹಲಿ:  ಮಧ್ಯಂತರ ಬಜೆಟ್‌ನಲ್ಲಿ ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 2024ನೇ ಸಾಲಿನಲ್ಲಿ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ನೇರ ಮತ್ತು ಪರೋಕ್ಷ ತೆರಿಗೆಯಲ್ಲಿ ಬದಲಾವಣೆ ಮಾಡದೇ 7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ ಎಂದು ಹೇಳಲಾಗಿದೆ.

7 ಲಕ್ಷದವರೆಗೆ ಆದಾಯ ಗಳಿಸೋರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತಿದೆ. ಅದಕ್ಕಿಂತ ಹೆಚ್ಚು ಆದಾಯ ಗಳಿಸುತ್ತಾ ಇರೋರಿಗೆ ಈ ಹಿಂದಿನ ತೆರಿಗೆಯಂತೆ ತೆರಿಗೆ ಮುಂದುವರೆಯಲಿದೆ. ಅದರ ಬದಲಾಗಿ ಯಾವುದೇ ತೆರಿಗೆ ಹೆಚ್ಚಳವಿಲ್ಲ ಎಂಬುದಾಗಿ ಹೇಳಿದ್ದಾರೆ.

ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, 2024 ರ ಮಧ್ಯಂತರ ಬಜೆಟ್ನಲ್ಲಿ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *