ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು: ದೇಶದ ಜನಕ್ಕೆ ಉತ್ತರ ಕೊಡಿ- ಸಿಎಂ ಸಿದ್ದರಾಮಯ್ಯ ವಾಗ್ದಾಳಿ. – Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಚಿತ್ರದುರ್ಗ,ಏಪ್ರಿಲ್,4,2024 (www.justkannada.in): ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು  ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಹಣ ಎಲ್ಲಿಂದ ಬರುತ್ತೆ? ಅದು ಕಪ್ಪು ಹಣ ಅಲ್ಲವೇ? ದೇಶದ ಜನಕ್ಕೆ ಉತ್ತರ ಕೊಡಿ ಮಿಸ್ಟರ್ ಮೋದಿಯವರೇ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದರು.

ಇಂದು  ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ಮಾಡಿದ ಸಿಎಂ ಸಿದ್ದರಾಮಯ್ಯ, ಅಧಿಕಾರದಲ್ಲಿದ್ದಾಗ ಹಣ ಲೂಟಿ ಮಾಡಿ, ಚುನಾವಣಾ ಸಮಯದಲ್ಲಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಕ್ರಾ ಮಾಡೋದು ಪ್ರಧಾನಿ ಮೋದಿ ಅವರ ಸಾಧನೆ. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಹಾಕುವುದಾಗಿ ಹೇಳಿದ್ದರು.  ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ  ಗೋವಿಂದ ಕಾರಜೋಳ ಅವರು ಇಲ್ಲಿಯವರಲ್ಲ. ಬಾಗಲಕೋಟೆಯಿಂದ ಇಲ್ಲಿಗೆ ಬಂದಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರು ಸೋತಾಗಲೂ ಜನರ ನಡುವೆ ಇದ್ದು ತಪಸ್ಸಿನಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಸಮಾಜ ಕಲ್ಯಾಣ ಸಚಿವರಾಗಿ ಕಾರಜೋಳ ಅವರು ಹಿಂದುಳಿದವರು, ದಲಿತರು, ಶ್ರಮಿಕರು, ದುಡಿಯುವ ವರ್ಗಗಳಿಗೆ ಏನೇನೂ ಮಾಡಿಲ್ಲ. ಆದರೆ ಚಂದ್ರಪ್ಪ ಅವರಲ್ಲಿ ಜನಸೇವೆ ಮಾಡುವ ಸಜ್ಜನಿಕೆ, ಕಾಳಜಿ ಇದೆ. ಆದ್ದರಿಂದ ಚಿತ್ರದುರ್ಗದ ಜನತೆ ‘ಮಿಸ್ಟರ್ ಕಾರಜೋಳ ಪ್ಲೀಸ್ ಗೋ ಬ್ಯಾಕ್’ ಎಂದು ಹೇಳಿ ಎಂದು ಕರೆ ನೀಡಿದರು.

 Key words: chitradurga- CM-Siddaramaiah -congress

Font Awesome Icons

Leave a Reply

Your email address will not be published. Required fields are marked *