ಬೆಂಗಳೂರು: ವಿರಾಟ್ ಕೊಹ್ಲಿ ಭಾನುವಾರ ಭಾರತಕ್ಕೆ ಮರಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪೂರ್ವಸಿದ್ಧತಾ ಶಿಬಿರಕ್ಕೆ ಸೇರಿಕೊಳ್ಳಲಿದ್ದಾರೆ.
ಈ ಸಂಬಂಧ ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್ ವಿಡಿಯೊ ಹಂಚಿಕೊಂಡಿದೆ.
ವೈಯಕ್ತಿಕ ಕಾರಣದಿಂದಾಗಿ ಕಳೆದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ವಿರಾಟ್ ಅನುಪಸ್ಥಿತಿಯಲ್ಲೂ ತವರಿನಲ್ಲಿ ನಡೆದ ಸರಣಿಯಲ್ಲಿ ಟೀಮ್ ಇಂಡಿಯಾ 4-1ರ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು.ಈ ನಡುವೆ ಎರಡನೇ ಮಗುವಿನ ಆಗಮನದ ಖುಷಿಯ ವಿಚಾರವನ್ನು ವಿರಾಟ್ ಕೊಹ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.
ಕೊಹ್ಲಿ ಈಗ ಆರ್‌ಸಿಬಿ ಪರ ಐಪಿಎಲ್‌ನಲ್ಲಿ ಆಡುವುದಕ್ಕಾಗಿ ಆಗಮಿಸಿದ್ದಾರೆ. ಮುಂಬರುವ ಟ್ವೆಂಟಿ-20 ವಿಶ್ವಕಪ್‌ಗೂ ಮುನ್ನ ಉತ್ತಮ ಲಯ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
. @imVkohli HAS ARRIVED
…and that moment is here!
The Red King is back in India, ready to start his #IPLonStar campaign on March 22 v CSK
Get ready to cheer for the King and groove to some Kingly beats as Star Sports’ new anthem – Kohli Calling has dropped on all platforms.… pic.twitter.com/wf4ypnHXDe
— Star Sports (@StarSportsIndia) March 17, 2024