ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಭ್ ಬಚ್ಚನ್

ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಹಿನ್ನೆಲೆ ನಿನ್ನೆ (ಮಾರ್ಚ್ 15) ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದರು.  ಅಮಿತಾಭ್ ಬಚ್ಚನ್​ಗೆ ಈಗ ವಯಸ್ಸು 81. ಅವರಿಗೆ ಹಲವು ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾದ ಅಮಿತಾಭ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ಮಾಹಿತಿ ಲಭಿಸಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಅಮಿತಾಭ್​ ಬಚ್ಚನ್​ಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಈ ವಿಚಾರ ತಿಳಿದಾಕ್ಷಣ ಅಮಿತಾಭ್​ ಬಚ್ಚನ್​ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಉಂಟಾಗಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಉಂಟಾಗಿಲ್ಲ. ನಟನ ಕಾಲಿನ ರಕ್ತನಾಳದ ಸಮಸ್ಯೆ ಉಂಟಾಗಿತ್ತು. ಇದಕ್ಕಾಗಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಅಮಿತಾಭ್ ಶುಕ್ರವಾರ ಸಂಜೆಯೇ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ.

Font Awesome Icons

Leave a Reply

Your email address will not be published. Required fields are marked *