ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದ್ದ, ಈ ಹಿನ್ನೆಲೆಯಲ್ಲಿ ಇಂದಿನಿಂದ (ಜ.3) 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾಧಿಗಳಿಂದ (ಕೊಮೊರ್ಬಿಡಿಟಿ) ಬಳಲುತ್ತಿರುವವರು ಜಿಲ್ಲಾ ಆಸ್ವತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಅವರು ನಿನ್ನೆ (ಜ.2)ರಂದು ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಮುಖ್ಯಸ್ಥರು ಮತ್ತು ಅದರ ಸದಸ್ಯರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಸದ್ಯದ ಪರಿಸ್ಥಿತಿ ಮತ್ತು ರಾಜ್ಯದಲ್ಲಿ ಕೋವಿಡ್-19 ನಿಭಾಯಿಸಲು ಕೈಗೊಳ್ಳಲಾಗಿರುವ ಸಿದ್ಧತೆಯನ್ನು ಚರ್ಚಿಸಿದರು.

ಸಭೆ ಬಳಿಕ ಮಾತನಾಡಿದ ಸಚಿವರು, ಸಾಂಕ್ರಾಮಿಕ ರೋಗದ ಮೊದಲ ಮತ್ತು ಎರಡನೇ ಅಲೆ ವೇಳೆ ನೀಡಲಾದ ಲಸಿಕೆಗಳನ್ನೇ ನೀಡುತ್ತೇವೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು ಕೊಮೊರ್ಬಿಡಿಟಿ ಇರುವವರು ಬುಧವಾರದಿಂದ ಜಿಲ್ಲಾ ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಪಡೆಯಬಹುದು ಎಂದರು.

ಜೆಎನ್ -1 ರೂಪಾಂತರವು ವೇಗವಾಗಿ ಹರಡುವ ಸಾಧ್ಯತೆಯಿದೆ ಆದರೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುವ ಸಾಧ್ಯತೆಯಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಗಾಬರಿಯಾಗುವ ಅಗತ್ಯವಿರಲಿಲ್ಲ.ಮಾಸ್ಕ್‌ಗಳನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಲ್ಲ ಆದರೆ ಜನಸಂದಣಿ ಇರುವ ಸ್ಥಳಗಳಲ್ಲಿ ಜನರು ಜಾಗರೂಕರಾಗಿರಬೇಕು ಎಂದರು.

Font Awesome Icons

Leave a Reply

Your email address will not be published. Required fields are marked *