ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ 2ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಪುನೀತ್ ರಾಜ್‌ಕುಮಾರ್ ಸಮಾಧಿಗೆ ರಾಜ್ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಪುನೀತ್ ಪತ್ನಿ ಅಶ್ವಿನಿ, ಮಕ್ಕಳಿಂದ ಪುನೀತ್ ಸಮಾಧಿಗೆ ನಮನ ಸಲ್ಲಿಸಿದ್ದಾರೆ .
ರಾಘವೇಂದ್ರ ರಾಜ್‌ಕುಮಾರ್, ಪುತ್ರ ಯುವರಾಜ್ಕುಮಾರ್, ಅಕ್ಕ ಪೂರ್ಣಿಮಾ, ಮಗಳು ಧನ್ಯಾ ರಾಮ್ಕುಮಾರ್ರಿಂದ ನಮನ ಸಲ್ಲಿಸಲಾಯಿತು. ಪುನೀತ್ಗೆ ಇಷ್ಟವಾಗಿದ್ದ ಆಹಾರ ಪದಾರ್ಥ ಇಟ್ಟು ಸಮಾಧಿಗೆ ಪೂಜೆ ಸಲ್ಲಿಸಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕವನ್ನು ಬಿಳಿ ಮಾರ್ಬಲ್ಸ್ ನಲ್ಲಿ ನಿರ್ಮಾಣ ಮಾಡಲಾಗಿದೆ. ರಾಜ್‌ಕುಮಾರ್ ಅವರ ಸ್ಮಾರಕದ ಬಳಿಯೇ ಅಪ್ಪು ಸಮಾಧಿ ಇದ್ದು, ಬೆಳಗ್ಗೆಯಿಂದಲೇ ಅಭಿಮಾನಿಗಳು ದಂಡುದಂಡಾಗಿ ಆಗಮಿಸುತ್ತಿದ್ದಾರೆ. ಸಾಲು ಸಾಲಾಗಿ ಆಗಮಿಸಿ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಗೌರವ ಸಲ್ಲಿಸುತ್ತಿದ್ದಾರೆ.
ಅಪ್ಪು ಸ್ಮಾರಕಕ್ಕೆ ಬಂದ ಅಭಿಮಾನಿಗಳಿ ಅಶ್ವಿನಿ ಪುನೀತ್ ಮತ್ತು ಯುವರಾಜ್ ಕುಮಾರ್ ಅವರು ಅನ್ನಸಂತರ್ಪಣೆ ಮಾಡುತ್ತಿದ್ದಾರೆ. ಈ ವೇಳೆ, ಧನ್ಯಾ, ಪೂರ್ಣಿಮ, ಅಪ್ಪು ಪುತ್ರಿ, ರಾಘಣ್ಣ ದಂಪತಿ ಸೇರಿದಂತೆ ಇಡೀ ಕುಟುಂಬ ಸಾಥ್ ನೀಡಿದೆ.