ಇಂದು ದೊಡ್ಮನೆಯ ಕುಡಿ ಅಪ್ಪು 2ನೇ ವರ್ಷದ ಪುಣ್ಯಸ್ಮರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಅಗಲಿ ಇಂದಿಗೆ ಎರಡು ವರ್ಷಗಳೇ ಕಳೆದಿದೆ. ಇಂದು ಪವರ್ ಸ್ಟಾರ್ ಪುನೀತ್ ರಾಜ್​​ ಕುಮಾರ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ. ನೆಚ್ಚಿನ ನಟನ ಪುಣ್ಯ ಸ್ಮರಣೆಯ ಕಾರ್ಯಕ್ರಮಕ್ಕೆ ಅಭಿಮಾನಿಗಳು ಮತ್ತು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಅಭಿಮಾನಿಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬಣ್ಣ ಬಣ್ಣದ ಹೂವುಗಳು, ಲೈಟಿಂಗ್ಸ್​​ನಿಂದ ಅಲಂಕಾರ ಮಾಡಿದ್ದಾರೆ. ಇನ್ನೂ ಅಪ್ಪು ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ನೇತ್ರದಾನ, ಅನ್ನದಾನ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಇನ್ನು ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಡಾ.ರಾಜ್ ಕುಟುಂಬ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಮತ್ತು ಡಾ.ರಾಜಕುಮಾರ್ ಸಮಸ್ತ ಕುಟುಂಬ ಪೂಜೆಯಲ್ಲಿ ಭಾಗಿಯಾಗಲಿದೆ.

2021 ಅಕ್ಟೋಬರ್ 29ರಂದು ಪುನೀತ್ ರಾಜ್​ ಕುಮಾರ್​ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅಂದಿನಿಂದ ಇಂದಿನವರೆಗೂ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಲೇ ಇದ್ದಾರೆ.

Font Awesome Icons

Leave a Reply

Your email address will not be published. Required fields are marked *