ಬೆಂಗಳೂರು: ಪರಿಶಿಷ್ಟ ಜಾತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಫೇಸ್ಬುಕ್ ಖಾತೆಯಲ್ಲಿ ಕ್ಷಮಾಪಣೆ ಕೋರಿದ್ದರು. ಇದಾದ ಬಳಿಕ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಇದೀಗ ತಮ್ಮ ಟ್ವೀಟರ್ ಖಾತೆಯಲ್ಲಿ ಮತ್ತೊಂದು ಪೋಸ್ಟ್ ಹಾಕಿರುವ ಉಪೇಂದ್ರ, ‘ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.
ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ ?’ ಎಂದು ಬರೆದುಕೊಂಡಿದ್ದಾರೆ.
ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ…— Upendra (@nimmaupendra) August 13, 2023