ಇಂದು ಪುನೀತ್ ರಾಜ್ ಕುಮಾರ್ ನಟನೆಯ ‘ಜಾಕಿ’ ಸಿನಿಮಾ ರಿಲೀಸ್

ಬೆಂಗಳೂರು: ಇಂದು ಪುನೀತ್ ರಾಜ್ ಕುಮಾರ್ ನಟನೆಯ ‘ಜಾಕಿ’ ಸಿನಿಮಾ ರಿಲೀಸ್ ಆಗ್ತಿದೆ. ಹೌದು. . ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬಕ್ಕೆ ಇನ್ನೂ ಎರಡು ದಿನ ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಈಗಿನಿಂದಲೇ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅಪ್ಪು ನಟನೆಯ ಜಾಕಿ ಸಿನಿಮಾ ರಿರೀಲಿಸ್ ಆಗುತ್ತಿದೆ. ಅದಕ್ಕಾಗಿ ಅನೇಕ ಚಿತ್ರಮಂದಿರಗಳು ತಯಾರಾಗಿವೆ.

ದುನಿಯಾ ಸೂರಿ ನಿರ್ದೇಶನದಲ್ಲಿ ಜಾಕಿ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಆಗಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಅಲ್ಲದೇ, ಈ ಸಿನಿಮಾದ ಹಾಡುಗಳು ಕೂಡ ಹೊಸ ರೀತಿಯಲ್ಲಿ ಕೇಳಿಸಿದ್ದವು. ಹಾಗಾಗಿ ಅಪ್ಪು ಡಾನ್ಸ್ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು.

ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ಚಿತ್ರದಲ್ಲಿ ಪುನೀತ್ ಗೆ ಜೋಡಿಯಾಗಿ ನಟಿ ಭಾವನಾ ನಟಿಸಿದ್ದು ಈ ಸಿನಿಮಾ ಭಾವನಾಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ಚಿತ್ರದ ಸೌಂಡ್, ರೆಸ್ಯುಲೇಷನ್ ಮತ್ತಷ್ಟು ಹೆಚ್ಚಿಸಲಾಗಿದೆಯಂತೆ. ಇನ್ನಷ್ಟು ಕಲರ್ ಫುಲ್ ನೊಂದಿಗೆ ಜಾಕಿ ಸಿನಿಮಾವನ್ನು ತೆರೆಗೆ ಬರುತ್ತಿದೆ.

Font Awesome Icons

Leave a Reply

Your email address will not be published. Required fields are marked *