ಇಂದು ಸನ್ ರೈಸರ್ಸ್ ಹೈದರಾಬಾದ್ Vs ಸಿಎಸ್ ಕೆ ಮುಖಾಮುಖಿ

ಹೈದರಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 18ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲಿಗೆ ಸಿದ್ಧವಾಗಿದೆ. ತಮ್ಮ ಕೊನೆಯ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ಉಭಯ ತಂಡಗಳು ಇಂದು ಸಂಜೆ  7:30ಕ್ಕೆ ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಸಿಎಸ್​ಕೆ 14ರಲ್ಲಿ ಜಯಿಸಿದೆ. ಹೈದರಾಬಾದ್ 2ರಲ್ಲಿ ಮಾತ್ರ ಗೆದ್ದಿದೆ.

ಪಂದ್ಯ ಸ್ಟಾರ್ ಸ್ಪೋರ್ಟ್ಸ್, ಜಿಯೋಸಿನಿಮಾ ವೆಬ್‌ಸೈಟ್ ಮತ್ತು ಅಪ್ಲಿಕೇಶನ್ ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ:
ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್ .

ಚೆನ್ನೈ ಸೂಪರ್ ಕಿಂಗ್ಸ್ ತಂಡ:
ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮತೀಶ ಪತಿರಾಣ, ಮುಸ್ತಾಫಿಜುರ್ ರೆಹಮಾನ್/ಮಹೀಶಾ ತೀಕ್ಷಾಣ.

Font Awesome Icons

Leave a Reply

Your email address will not be published. Required fields are marked *