ಇಬ್ಬರು ಮಕ್ಕಳನ್ನು ಬಿಟ್ಟು ಗೃಹಿಣಿ ಆತ್ಮಹತ್ಯೆ

ಮೈಸೂರು: ಹಣಕ್ಕಾಗಿ ಗಂಡ ಮತ್ತು ಆತನ ಮನೆಯವರು ಕಿರುಕುಳಕ್ಕೆ ಗೃಹಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.

ವಿಜಯಲಕ್ಷ್ಮಿ (35) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈಕೆ ನಂಜನಗೂಡು ತಾಲೂಕಿನ ಹೊಸಕೋಟೆಯ ಹರೀಶ್ ಎಂಬವರನ್ನು ಮದುವೆಯಾಗಿ 12 ವರ್ಷಗಳಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ವರದಕ್ಷಿಣೆ ಹಣಕ್ಕಾಗಿ ಗಂಡ ಹರೀಶ್, ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ ಮತ್ತು ಮಹೇಂದ್ರ ದಿನ ಪಿಡಿಸುತ್ತಿದ್ದರು.

ಕಿರುಕುಳ ತಾಳಲಾರದೆ ಮನನೊಂದು ಇಬ್ಬರು ಮಕ್ಕಳನ್ನು ಬಿಟ್ಟು ಗಂಡನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ.

Font Awesome Icons

Leave a Reply

Your email address will not be published. Required fields are marked *