ಇಸ್ರೇಲ್‌ ರಾಯಭಾರಿ ಕಚೇರಿಗೆ ಬಾಂಬ್‌ ಬೆದರಿಕೆ ಕರೆ

ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ ಎಂಬ ಕರೆ ಬಂದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳು ತಕ್ಷಣವೇ ದೌಡಾಯಿಸಿವೆ. ಆದರೆ ಅಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಸಂಜೆ ಚಾಣಕ್ಯಪುರಿ ಪ್ರದೇಶದಲ್ಲಿ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ನಡೆದಿರುವುದಾಗಿ ಕರೆ ಬಂದಿದೆ. “ಇಲ್ಲಿಯವರೆಗೆ ಸ್ಥಳದಲ್ಲಿ ಏನೂ ಪತ್ತೆಯಾಗಿಲ್ಲ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.

ರಾಯಭಾರ ಕಚೇರಿಯ ಸಿಬ್ಬಂದಿಗಳಿಗೆ ಏನೂ ಆಗಿಲ್ಲ. ಅವರು ಪ್ರಕರಣದ ತನಿಖೆಗೆ ಸ್ಥಳೀಯ ಅಧಿಕಾರಿಗಳೊಂದಿಗೆ ಸಹಕರಿಸುತ್ತಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಸುತ್ತಮುತ್ತಲಿನ ಜನರು ದೊಡ್ಡ ಶಬ್ದವನ್ನು ಕೇಳಿದರು. ಅಗ್ನಿಶಾಮಕ ದಳದ ಮಾಹಿತಿಯಂತೆ ಅವರ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ. ಅಧಿಕಾರಿಗಳು ಇನ್ನೂ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *