ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಕ್ರಮ ಪ್ರಶ್ನಿಸಿದ್ದ ಸಿ.ಎಂ.ಇಬ್ರಾಹಿಂ ಮಾಡಿದ ದಾವೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವಜಾ ಮಾಡಲಾಗಿದೆ.
ಉಚ್ಛಾಟಿನೆ ಬಳಿಕ ಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಇಬ್ರಾಹಿಂ ಅವರು ಹೆಚ್.ಡಿ.ದೇವೇಗೌಡ ಮತ್ತು ಹೆಚ್ಡಿ ಕುಮಾರಸ್ವಾಮಿ ಪ್ರತಿವಾದಿಯಾಗಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ಇಬ್ರಾಹಿಂ ಅರ್ಜಿ ಸಲ್ಲಿಸಿದ್ದರು.
ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದರು. ಈ ವೇಳೆ ದಾವೆ ಊರ್ಜಿತವಲ್ಲವೆಂದು ಹೆಚ್ಡಿ ಕುಮಾರಸ್ವಾಮಿ ಪರ ವಕೀಲ ನಿಶಾಂತ್ ವಾದಿಸಿದ್ದಾರೆ.
ಜೆಡಿಎಸ್ ವರಿಷ್ಠರು ಯಾವುದೇ ಮುನ್ಸೂಚನೆ ನೀಡದೇ ತಮ್ಮನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಸಿಟಿ ಸಿವಿಲ್ ಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ತಮ್ಮನ್ನು ಕಾನೂನು ಬಾಹಿರವಾಗಿ ಉಚ್ಚಾಟನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ವಕೀಲ ಶತಬೀಷ್ ಹಾಗೂ ಶಿವಣ್ಣ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.
ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ಸಿ.ಎಂ ಇಬ್ರಾಹಿಂ ಅವರನ್ನು ಅಕ್ಟೋಬರ್ 19ರಂದು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.