ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆ

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಂಗನಕಾಯಿಲೆ ಪತ್ತೆಯಾಗಿದೆ. ಸಿದ್ದಾಪುರದ ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವನಿಗೆ ಕೆಎಫ್​ಡಿ ಇರುವುದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಈ ವ್ಯಕ್ತಿ ಮೊದಲು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಕೆಎಫ್​​ಡಿ ಪಾಸಿಟಿವ್ ದೃಢವಾಗುತ್ತಿದ್ದಂತೆ ವ್ಯಕ್ತಿಯನ್ನ ಇದೀಗ ಸಿದ್ದಾಪುರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗನ ಕಾಯಿಲೆ ‌ ಸೋಂಕಿಗೆ ಶಿವಮೊಗ್ಗದ ಹೊಸನಗರ ತಾಲೂಕಿನ ಗ್ರಾಮದ 18 ವರ್ಷದ ಯುವತಿಯೊಬ್ಬರು  ಸಾವನ್ನಪ್ಪಿದ್ದರು. ಇದು 2024ರ ಅವಧಿಯಲ್ಲಿ ಜಿಲ್ಲೆಯಲ್ಲಿ ಕೆಎಫ್​ಡಿ ಸೋಂಕಿಗೆ ಬಲಿಯಾದ ಮೊದಲ ಪ್ರಕರಣ ಆಗಿತ್ತು.

Font Awesome Icons

Leave a Reply

Your email address will not be published. Required fields are marked *