ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಇಲ್ಲಿದೆ ನೋಡಿ ಆಯ್ಕೆಯಾದ ಆಟಗಾರರ ಪಟ್ಟಿ. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್

ಮುಂಬೈ,ಸೆಪ್ಟಂಬರ್,5,2023(www.justkannada.in):  ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ  ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು  ಪ್ರಕಟಿಸಿದೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕ್ಯಾಂಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಂಡವನ್ನು  ಪ್ರಕಟಿಸಿದ್ದಾರೆ. ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ.  ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗಿದೆ. ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ತಂಡದಲ್ಲಿದ್ದಾರೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಜಸ್ ಪ್ರಿತ್ ಬೂಮ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ತಂಡ ಹೀಗಿದೆ..

ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್,  ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಶಾರ್ದೂಲ್‌ ಠಾಕೂರ್‌, ಅಕ್ಷರ್​ ಪಟೇಲ್‌, ಸೂರ್ಯಕುಮಾರ್‌ ಯಾದವ್.

ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ ಹೀಗಿದೆ.

ಭಾರತ vs ಆಸ್ಟ್ರೇಲಿಯಾ- ಅಕ್ಟೋಬರ್ 8, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

ಭಾರತ vs ಅಫಘಾನಿಸ್ತಾನ- ಅಕ್ಟೋಬರ್ 11, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ

ಭಾರತ vs ಪಾಕಿಸ್ತಾನ-ಅಕ್ಟೋಬರ್ 14, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

ಭಾರತ vs ಬಾಂಗ್ಲಾದೇಶ-  ಅಕ್ಟೋಬರ್19, ಎಂಸಿಎ ಸ್ಟೇಡಿಯಂ, ಪುಣೆ

ಭಾರತ vs ನ್ಯೂಜಿಲ್ಯಾಂಡ್​- ಅಕ್ಟೋಬರ್ 22, HPCA ಸ್ಟೇಡಿಯಂ, ಧರ್ಮಶಾಲಾ

ಭಾರತ vs ಇಂಗ್ಲೆಂಡ್- ಅಕ್ಟೋಬರ್ 29, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

ಭಾರತ vs ಶ್ರೀಲಂಕಾ- ನವೆಂಬರ್ 2, ವಾಂಖೆಡೆ ಸ್ಟೇಡಿಯಂ, ಮುಂಬೈ

ಭಾರತ vs ದಕ್ಷಿಣ ಆಫ್ರಿಕಾ-  ನವೆಂಬರ್ 5, ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಭಾರತ vs ನೆದರ್ಲೆಂಡ್ಸ್​ –  ನವೆಂಬರ್ 12, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

Key words: India squad- announced – ODI -World Cup

Font Awesome Icons

Leave a Reply

Your email address will not be published. Required fields are marked *