ಒಂದೇ ಕುಟುಂಬದ ಐವರ ಸಜೀವದಹನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ರಾಜಸ್ಥಾನ: ಜೈಪುರದ ಮನೆಯೊಂದರಲ್ಲಿ ಇಂದು(ಮಾ.21) ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕುಟುಂಬದ ಐವರು ಸಜೀವದಹನವಾಗಿದ್ದಾರೆ. ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.

ವಿಶ್ವಕರ್ಮ ಪೊಲೀಸ್ ಠಾಣೆ ವ್ಯಾಪ್ತಿಯ ಜೈಸಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರೆಲ್ಲರೂ ಬಿಹಾರ ನಿವಾಸಿಗಳು. ಈ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಮಾಹಿತಿ ಪಡೆದ ತಕ್ಷಣ ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿದ್ದಾರೆ. ಸದ್ಯ ಪೊಲೀಸ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Font Awesome Icons

Leave a Reply

Your email address will not be published. Required fields are marked *