ಒಬ್ಬ ಸಾವು, ಹಲವರು ಸಿಲುಕಿರುವ ಶಂಕೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬಿಹಾರ: ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸ್ಲ್ಯಾಬ್ ಕುಸಿದು 30 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ಹೊರತರುವ ಕಾರ್ಯ ನಡೆಯುತ್ತಿದೆ.

ಸದ್ಯ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಬಂದಿರುವ ಮಾಹಿತಿಯ ಪ್ರಕಾರ ಈ ಸೇತುವೆಯನ್ನು ಭಾರತಮಾಲಾ ಯೋಜನೆಯಡಿ ನಿರ್ಮಿಸಲಾಗುತ್ತಿದೆ . ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಸಿಲುಕಿರುವವರ  ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

 

Font Awesome Icons

Leave a Reply

Your email address will not be published. Required fields are marked *