ಮಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತರನ್ನು ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಮಿತ್ ಶೆಟ್ಟಿಯವರ ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.