ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ: ರಾಜಭವನ ಸ್ಪಷ್ಟನೆ

ಬೆಂಗಳೂರು: ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿಲ್ಲ. ಈ ಬಗ್ಗೆ ರಾಜಭವನ ಸ್ಪಷ್ಟೀಕರಣ ನೀಡಿದೆ.

ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

ಅಧಿವೇಶನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ, ಸರ್ಕಾರಕ್ಕೆ ವಾಪಸ್ ಕಳಿಸಲಾಗಿದೆ. ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ನಿಗದಿಯಾಗಿದೆ. ಅಧಿವೇಶನದಲ್ಲೇ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಸರ್ಕಾರಕ್ಕೆ ಸೂಚಿಸಿ ರಾಜ್ಯಪಾಲರು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್‌ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *