ಕನ್ನಡ ಭವನ ಉದ್ಘಾಟನೆಯಿಂದ ಕನ್ನಡ ಕೆಲಸಗಳಿಗೆ ಶಕ್ತಿ: ಶಾಸಕ ಪ್ರಭು ಚವ್ಹಾಣ

ಬೀದರ್: ಜಿಲ್ಲೆಯಲ್ಲಿ ಕನ್ನಡ ಭವನ ಉದ್ಘಾಟನೆಯಿಂದಾಗಿ ಜಿಲ್ಲೆಯಲ್ಲಿ ಕನ್ನಡದ ಕೆಲಸಗಳು ಇನ್ನಷ್ಟು ಹುರುಪಿನಿಂದ ನಡೆಸಲು ಅನುಕೂಲವಾಗಲಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾರಣಾಂತರಗಳಿಂದ ಈ ಅವಿಸ್ಮರಣೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಸಾಕಷ್ಟು ದಿನಗಳ ಕನಸು ನನಸಾಗಿರುವುದಕ್ಕೆ ಸಂತೋಷವಾಗಿದೆ. ಜಿಲ್ಲೆಯಲ್ಲಿ ಸುಂದರ ಕನ್ನಡ ಭವನ ನಿರ್ಮಾಣವಾಗಬೇಕು ಎನ್ನುವುದು ಹಲವು ದಿನಗಳ ಬೇಡಿಕೆಯಾಗಿತ್ತು. ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಕನ್ನಡ ಭವನಕ್ಕೆ ಅನುದಾನ ಬಿಡುಗಡೆ ಮಾಡಿಸಿದ್ದೆ. ನನ್ನ ಅವಧಿಯಲ್ಲಿಯೇ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿರುವುದು ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ ಎಂದಿದ್ದಾರೆ.

ಇದೀಗ ಕಟ್ಟಡ ಭವನ ನಿರ್ಮಾಣಗೊಂಡು ಉದ್ಘಾಟನೆ ನೆರವೇರುತ್ತಿರುವುದಕ್ಕೆ ಇನ್ನಿಲ್ಲದ ಸಂತೋಷವಾಗುತ್ತಿದೆ. ಬೀದರ ಗಡಿ ಭಾಗದಲ್ಲಿದ್ದರೂ ಅಪ್ಪಟ ಕನ್ನಡ‌ ಜಿಲ್ಲೆಯಾಗಿದೆ. ಕನ್ನಡಪರ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತವೆ. ಕಸಾಪ ಜಿಲ್ಲಾ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ಅವರ ಮುಂದಾಳತ್ವದಲ್ಲಿ ಕನ್ನಡಪರ ಕಲಸಗಳು ಉತ್ತಮ ರೀತಿಯಲ್ಲಿ ನಡೆಯುತ್ತಿವೆ. ಕನ್ನಡ ಭವನ ನಿರ್ಮಾಣದಿಂದಾಗಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ, ಕಲೆ ಮತ್ತು ಸಾಂಸ್ಕೃತಿಕ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗಲು ಸಾಕಷ್ಟು ಅನುಕೂಲವಾಗಲಿದೆ. ಕನ್ನಡದ ಕೆಲಸಗಳಿಗೆ ನನ್ನ ಸಹಕಾರ ಸದಾ ಇರುತ್ತದೆ ಎಂದಿದ್ದಾರೆ.

Font Awesome Icons

Leave a Reply

Your email address will not be published. Required fields are marked *