ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್

ಮಂಡ್ಯ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ನೀಡಿದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ.

ಡಿಸೆಂಬರ್ 24 ರಂದು ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನು ಉದ್ದೇಶಿಸಿ ಮುಸ್ಲಿಮರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಈ ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯ ಪೊಲೀಸರು IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *