ತೆಲಂಗಾಣ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್. ಶರ್ಮಿಳಾ ಅವರು ಈ ವಾರಾಂತ್ಯಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿಶೇಷವೆಂದರೆ ತೆಲಂಗಾಣ ವಿಧಾನಸಭೆ ಚುನಾವಣೆ ಮುಗಿದ ಒಂದು ತಿಂಗಳ ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಇದೇ ವರ್ಷ ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ.
2021ರಲ್ಲೇ ಶರ್ಮಿಳಾ ತನ್ನ ಸಹೋದರನೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಹೊಂದಿರುವುದಾಗಿ ಸ್ಪಷ್ಟಪಡಿಸಿದ್ದರು. ತೆಲಂಗಾಣದಲ್ಲಿ ವೈಎಸ್‌ಆರ್‌ಸಿಪಿಗೆ ಅಸ್ತಿತ್ವವಿಲ್ಲ ಎಂದು ಅವರು ಹೇಳಿದ್ದರು. ಜುಲೈನಲ್ಲಿ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿದ್ದರು.
ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆಯೂ ಶರ್ಮಿಳಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಥಿತಿ ಉತ್ತಮವಾಗಿದ್ದು, ಅದನ್ನು ದುರ್ಬಲಗೊಳಿಸಲು ಬಯಸುವುದಿಲ್ಲ ಎಂದು ಹೇಳಿದರು.