ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಬಿಡುಗಡೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಘೋಷಣೆಯಾಗಿದೆ. ಒಟ್ಟು 46 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಪಿ ಚಿದಂಬರಂ ಅವರಿಗೆ ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಅಜಯ್‌ ರೈ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿದ್ದ ಡ್ಯಾನಿಶ್‌ ಅಲಿ ಅವರಿಗೆ ಉತ್ತರ ಪ್ರದೇಶದ ಅಮ್ರೋಹ್‌ ಕ್ಷೇತ್ರದ ಟಿಕೆಟ್‌ ನೀಡಲಾಗಿದೆ.

ಕಾಂಗ್ರೆಸ್‌ನ ನಾಲ್ಕನೇ ಪಟ್ಟಿಯಲ್ಲಿ ಅಸ್ಸಾಂ, ಅಂಡಮಾನ್‌, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮಿಜೋರಾಂ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ಕ್ಷೇತ್ರಗಳ ಟಿಕೆಟ್‌ ಪ್ರಕಟಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *