ಕಾಂಗ್ರೆಸ್ ಶಾಸಕನ ಮನೆ ಮೇಲೆ ಇ.ಡಿ ದಾಳಿ

ಕೋಲಾರ: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ತೀವ್ರ ಪರಿಶೀಲನೆ ನಡೆಸಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಕೊಮ್ಮನಹಳ್ಳಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಜೊತೆಗೆ ಶಾಸಕರಿಗೆ ಸೇರಿದ ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ .

ಮಾಲೂರು ಶಾಸಕರಾಗಿರುವ ನಂಜೇಗೌಡರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ಅಧ್ಯಕ್ಷರಾಗಿದ್ದಾರೆ. ಇವರ ವಿರುದ್ಧ  ಕೊಚಿಮುಲ್ ನೇಮಕಾತಿ ವಿಚಾರದಲ್ಲಿ ಅವ್ಯವಹಾರ ಆರೋಪ ಕೇಳಿಬಂದಿತ್ತು.

Font Awesome Icons

Leave a Reply

Your email address will not be published. Required fields are marked *