ಕಾಂತಾರ ಸಿನಿಮಾದ ‘ವರಾಹ ರೂಪಂ’ ಕಾಪಿರೈಟ್ಸ್ ಪ್ರಕರಣ ರದ್ದು

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿನ ಹಕ್ಕು ಸ್ವಾಮ್ಯ ಉಲ್ಲಂಘನೆ ಪ್ರಕರಣ ಹಲವು ತಿಂಗಳುಗಳಿಂದ ಕೇರಳ ಹೈಕೋರ್ಟಿನಲ್ಲಿ ನಡೆಯುತ್ತಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಸಿಕ್ಕಿದ್ದು, ದೂರು ದಾರರು ಮತ್ತು ಪ್ರತಿವಾದಿಗಳು ಸಂಧಾನ ಮಾಡಿಕೊಂಡಿರುವ ಕಾರಣದಿಂದಾಗಿ ಕೇರಳ ಹೈಕೋರ್ಟ್ ಈ ಪ್ರಕರಣವನ್ನೇ ರದ್ದು ಮಾಡಿದೆ.

ಕಾಂತಾರ ಸಿನಿಮಾ ತಂಡದ ಪರವಾಗಿ ವಾದ ಮಂಡಿಸುತ್ತಿದ್ದ ವಿಜಯ್ ವಿ ಪೌಲ್, ಸಿನಿಮಾ ಟೀಂ ಮತ್ತು ಮಾತೃಭೂಮಿ ಪಬ್ಲಿಷರ್ಸ್ ನಡುವಿನ ಸಂಧಾನವನ್ನು ಕೋರ್ಟ್ ಗಮನಕ್ಕೆ ತಂದರು. ಹಾಗಾಗಿ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದು ಮಾಡುವಂತೆ ಮನವಿ ಮಾಡಿಕೊಂಡರು. ಈ ಮನವಿಯನ್ನು ಪರಿಗಣಿಸಿ ಕೇರಳ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ.

 

 

Font Awesome Icons

Leave a Reply

Your email address will not be published. Required fields are marked *