ಕಾಲರಾ ಭೀತಿ : ಕುಡಿಯಲು ಬಿಸಿ ನೀರು ಕೊಡುವಂತೆ ಕೆಫೆಗಳಿಗೆ ಆದೇಶಿಸಿದ ಬಿಬಿಎಂಪಿ. – Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು, ಏ. 05, 2024  : (www.justkannada.in news )  ರಾಜಧಾನಿ ಬೆಂಗಳೂರು ನಗರದಲ್ಲಿ ಕಾಲರಾ ಭೀತಿ ಉಲ್ಭಣಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಗತ್ಯ ತುರ್ತು ಕ್ರಮಕ್ಕೆ ಮುಂದಾಗಿದೆ.

ಮಲ್ಲೇಶ್ವರಂನಲ್ಲಿ ಕಾಲರಾ ಶಂಕಿತ ಪ್ರಕರಣ ವರದಿಯಾದ ಬಳಿಕ, ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಮುಂಜಾಗ್ರತ ಕ್ರಮಕ್ಕೆ ಮುಂದಾಗಿದ್ದಾರೆ. ಸಂಭವನೀಯ ಕಾಲರಾ ಏಕಾಏಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಎಡೆಮಾಡಿದೆ.

ರೋಗ ಹರುಡುವಿಕೆ ನಿಯಂತ್ರಣ ಸಂಬಂದ ಬಿಬಿಎಂಪಿ ಅಳವಡಿಸಿಕೊಂಡ ಮುಂಜಾಗ್ರತಾ ಕ್ರಮಗಳು.

ರೋಗ ಹರುಡುವಿಕೆಯನ್ನು ನಿಭಾಯಿಸಲು ವಿಧಾನಸಭಾ ಕ್ಷೇತ್ರವಾರು/ಕ್ಷೇತ್ರ ಮಟ್ಟದಲ್ಲಿ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ರಚಿಸಲು ಎಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಆರೋಗ್ಯ ವೈದ್ಯಾಧಿಕಾರಿಗಳಿಗೆ ಸೂಚಿಸಿದೆ.

ಎಲ್ಲಾ ಹೋಟೆಲ್‌ಗಳು/ರೆಸ್ಟೋರೆಂಟ್ಗಳು/ಕೆಫೆಗಳ ಮಾಲೀಕರಿಗೆ, ಗ್ರಾಹಕರಿಗೆ ಕುಡಿಯಲು ಕಾಯಿಸಿದ ನೀರನ್ನು ವಿತರಿಸಲು ಸಲಹೆ ನೀಡಿದೆ.

ಪಾಲಿಕೆಯ ವ್ಯಾಪ್ತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಖಾಸಗಿ ಲ್ಯಾಬ್‌ಗಳು ಮತ್ತು ಸರ್ಕಾರಿ ಆಸ್ಪತ್ರೆಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕ ಆಸ್ಪತ್ರೆ, ಜನರಲ್ ಆಸ್ಪತ್ರೆ, ವೈದ್ಯಕೀಯ ಶಿಕ್ಷಣ ಅಡಿಯಲ್ಲಿ ಬರುವ ಆಸ್ಪತ್ರೆಗಳು ಶಂಕಿತ ಪ್ರಕರಣಗಳು ವರದಿಯಾದ್ದಲ್ಲಿ ಸರ್ಕಾರ ನಿಗಧಿಪಡಿಸಿರುವ ಐ.ಹೆಚ್.ಐ.ಪಿ (IHIP) ತಂತ್ರಾಶದಲ್ಲಿ ಕಡ್ಡಾಯವಾಗಿ ವರದಿ ಮಾಡುವಂತೆ ಸೂಚಿಸಿದೆ.

ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಗಾಗಿ ನೀರಿನ ಮಾದರಿಗಳನ್ನು ಹಿರಿಯ ಆರೋಗ್ಯ ಪರಿವೀಕ್ಷಕರು ಸಂಗ್ರಹಿಸಿ PHI ಲ್ಯಾಬ್‌ಗೆ ಪ್ರತಿನಿತ್ಯ ಕಳುಹಿಸಲು ಸೂಚಿಸಲಾಗಿದೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ORS ಕಾರ್ನರ್‌ ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗೆ ಬರುವ ಹೊರರೋಗಿಗಳಲ್ಲಿ ಜಾಗೃತಿ ಮೂಡಿಸುವುದು ಹಾಗೂ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟುವ ಬಗ್ಗೆ ಆರೋಗ್ಯ ಶಿಕ್ಷಣ ನೀಡುವಂತೆ ಹೇಳಲಾಗಿದೆ.

Key words :  Cholera outbreak ,  sparks alarm ,  Bengaluru,  BBMP , urges.  hot water provision , in restaurants, hotels

 

ENGLISH SUMMARY :

In the wake of the outbreak of cholera in bengaluru city, the BBMP has taken necessary emergency measures.

After a suspected case of cholera was reported in Malleswaram, the authorities have stepped in to take precautionary measures. The emergence of a possible cholera outbreak has raised concerns.

 

Font Awesome Icons

Leave a Reply

Your email address will not be published. Required fields are marked *