ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಚಾಮರಾಜನಗರ: ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಯುವಕನ ಕುಟುಂಬಸ್ಥರಿಗೆ ಮಾಜಿ ಶಾಸಕ ಆರ್ ನರೇಂದ್ರ ಸಾಂತ್ವನ ಹೇಳುವ ಜೊತೆಗೆ ಪರಿಹಾರ ಹಣದ ಭರವಸೆ ನೀಡಿದ್ದಾರೆ.

ಹನೂರು ತಾಲೂಕಿನ ಕತ್ತೆ ಕಾಲ್ ಪೋಡು ಗ್ರಾಮದ ಜಡಯ್ಯ ಎಂಬುವರ ಪುತ್ರ ಮಾದ(೨೩) ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಬುಧವಾರ ರಾತ್ರಿ ಕಾರ್ಯನಿಮಿತ್ತ ಹಿರಿಯಂಬಲ ಗ್ರಾಮಕ್ಕೆ ತೆರಳಿ ಕತ್ತೆ ಕಾಲ್ ಪೋಡು ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದ. ಯುವಕ ಕಾಡಾನೆ ದಾಳಿಗೆ ಮೃತಪಟ್ಟಿರುವ ವಿಚಾರವನ್ನು ಸ್ಥಳೀಯರು ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಮಾಹಿತಿ ತಿಳಿದ ತಕ್ಷಣ ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಹಾಗೂ ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶವವನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದರು.

ಮಾಜಿ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ, ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಡಿ ಎಫ್ ಒ ರವರ ಜೊತೆ ಮಾತನಾಡಿದ್ದು 5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಉಳಿದ ಹತ್ತು ಲಕ್ಷ ಹಣವನ್ನು ಆದಷ್ಟು ಬೇಗ ಕೊಡಿಸುವಂತೆ ಸೂಚನೆ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *