ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ

ನಂಜನಗೂಡು: ಕುಡಿದ ಅಮಲಿನಲ್ಲಿ ಪತ್ನಿಗೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೊತ್ತನಹಳ್ಳಿ ಕಾಲೋನಿಯಲ್ಲಿ ನಡೆದಿದೆ.

20 ವರ್ಷದ ಮಾಚಿ ಮೃತ ದುರ್ದೈವಿ. 28 ವರ್ಷದ ರವಿ ಬಂಧಿತ ಆರೋಪಿಯಾಗಿದ್ದಾನೆ. ಕುಡಿದ ಅಮಲಿನಲ್ಲಿ ಗಂಡ ಹೆಂಡತಿ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಪತಿ ರವಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕುತ್ತಿಗೆ ಮತ್ತು ತಲೆಗೆ ಬಲವಾಗಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪತ್ನಿ ಮಾಚಿ ಮೃತ ಪಟ್ಟಿದ್ದಾಳೆ.

ಹೆಂಡತಿಯನ್ನು ಕುಡಿದ ಅಮಲಿನಲ್ಲಿ ಕೊಲೆ ಮಾಡಿ ರವಿ ತಪ್ಪಿಸಿಕೊಂಡಿದ್ದ. ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ ಪಿ ಗೋವಿಂದರಾಜು, ವೃತ್ತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟಿ ಮತ್ತು ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಬಂಧಿಕರಿಂದ ದೂರು ಪಡೆದುಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಹುಲ್ಲಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊತ್ತನಹಳ್ಳಿ ಮತ್ತು ಕೊತ್ತನಹಳ್ಳಿ ಕಾಲೋನಿಯಲ್ಲಿ ಅಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಕುಡಿದುಕೊಂಡು ಮನೆಗಳಲ್ಲಿ ಗಲಾಟೆಗಳು ನಡೆಯುತ್ತಿವೆ. ಈ ಕೊಲೆಗೆ ಅಕ್ರಮವಾಗಿ ಮಧ್ಯ ಮಾರಾಟವಾಗುತ್ತಿರುವುದೇ ಮುಖ್ಯ ಕಾರಣವಾಗಿದೆ. ಕೂಡಲೇ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಿ ಎಂದು ಗ್ರಾಮಸ್ಥರು ಒತ್ತಾಯಿಸಿದರು. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Font Awesome Icons

Leave a Reply

Your email address will not be published. Required fields are marked *