ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು

ನವದೆಹಲಿ:  ಮಧ್ಯಪ್ರದೇಶದ ‘ಕುನೊ’ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಮತ್ತೊಂದು ಚೀತಾ ಮೃತಪಟ್ಟಿದೆ. ಸಾವಿಗೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿದುಬರಲಿದೆ.

ಇಂದು ಬೆಳಗ್ಗೆಯಿಂದಲೇ ಮಂಕಾಗಿದ್ದ ಚೀತಾ ಶೌರ್ಯ  3:17 ರ ವೇಳೆಗೆ ಮೃತಪಟ್ಟಿತು ಎಂದು ಹೇಳಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ ನಿತ್ರಾಣ ಸ್ಥಿತಿಯಲ್ಲಿದ್ದ ಚೀತಾವನ್ನು  ನಿಗಾವಣಾ ತಂಡ ಗಮನಿಸಿತ್ತು. ನಂತರ ಸ್ವಲ್ಪ ಹೊತ್ತಿನ ನಂತರ ಚೇತರಿಸಿಕೊಂಡಿತಾದರೂ ಚೀತಾ ನಡುಗುತ್ತಿತ್ತು,   3:17 ರ ವೇಳೆಗೆ ಮೃತಪಟ್ಟಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

Font Awesome Icons

Leave a Reply

Your email address will not be published. Required fields are marked *