ಕೂಡಲೇ ಕೈ ಬಿಡುವಂತೆ ಜೋಶಿ ಆಗ್ರಹ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹುಬ್ಬಳ್ಳಿ: ನಗರ್ತ ಪೇಟೆಯ ಮೊಬೈಲ್‌ ಅಂಗಡಿಯೊಂದರಲ್ಲಿ ಇತ್ತೀಚೆಗೆ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಹಲ್ಲೆಗೊಳಗಾದ ವ್ಯಕ್ತಿಯ ಮೇಲೆಯೇ ದೂರು ದಾಖಲಾಗಿರುವುದನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಟುವಾಗಿ ಖಂಡಿಸಿದ್ದಾರೆ.

ಅವರು ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಲ್ಹಾದ್‌ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹನುಮಾನ್ ಚಾಲೀಸಾ ಆಡಿಯೊ ಹಾಕಿದ್ದವರ ಮೇಲೆ ಎಫ್‌ಐಆರ್‌ ಹಾಕಿರುವುದು ಎಷ್ಟು ಸರಿ? ಇವರೇನು ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತಲೂ ಕಡೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹನುಮಾನ್ ಚಾಲೀಸಾವನ್ನು ಹಾಕಿದ ಕಾರಣಕ್ಕೆ ಹಲ್ಲೆಗೊಳಗಾದ ಅಂಗಡಿಯಾತನ ಮೇಲೆ ಹಾಕಲಾಗಿರುವ ಎಫ್‌ಐಆರ್‌ ಅನ್ನು ರಾಜ್ಯ ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದರು.

ಹನುಮಾನ್ ಚಾಲೀಸಾ ಪಠಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೇ ಹಿಂದೂ ವಿರೋಧಿ ನಡೆ ತೋರಿದೆ ಎಂದು ಪ್ರಲ್ಹಾದ್‌ ಜೋಶಿ ಹರಿಹಾಯ್ದರು.

Font Awesome Icons

Leave a Reply

Your email address will not be published. Required fields are marked *