ಕೆಆರ್​​​​ಎಸ್ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ: ಹೈಕೋರ್ಟ್ ಆದೇಶ

ಬೆಂಗಳೂರು: ಕೆಆರ್​​​​ಎಸ್ ಅಣೆಕಟ್ಟೆಯ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿ ರಾಜ್ಯ ಹೈಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ.

ಕೆಆರ್​​​​ಎಸ್ ಡ್ಯಾಂ ಬಳಿ ಹಲವು ಬಾರಿ ದೊಡ್ಡ ಶಬ್ದ ಕೇಳಿಬಂದಿದ್ದು, ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ. ಅಣೆಕಟ್ಟೆಯ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮವಾಗಲಿದೆ. ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ ಎಂ. ವಿಶ್ವೇಶ್ವರಯ್ಯರ ಕೊಡುಗೆ ಬಹಳಷ್ಟಿದೆ ಹೇಳಿದೆ.

ಕೆಆರ್​​​​ಎಸ್​ಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ. ಮೂರು ರಾಜ್ಯಗಳು ಕಾವೇರಿ ನೀರಿಗಾಗಿ ಹೋರಾಡುತ್ತಿವೆ. ಆದರೆ ಕೆಆರ್​​​​ಎಸ್ ಅಣೆಕಟ್ಟೆ ಸಂರಕ್ಷಣೆಗೆ ಪ್ರಯತ್ನಿಸುತ್ತಿಲ್ಲ. ಅಣೆಕಟ್ಟೆಗೆ ತೊಂದರೆಯಾದರೆ ಆಗುವ ಅನಾಹುತಗಳ ಅರಿವಿದೆಯೇ? ಅಣೆಕಟ್ಟೆಗೆ ತೊಂದರೆಯಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಕೆಆರ್​​​​ಎಸ್ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿದೆ.

Font Awesome Icons

Leave a Reply

Your email address will not be published. Required fields are marked *