ಬೆಂಗಳೂರು: ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘KD’ ಭರ್ಜರಿಯಾಗಿಯೇ ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಚಿತ್ರದಲ್ಲಿ ಬಹುದೊಡ್ಡ ತಾರಾಗಣವೇ ಇದ್ದು, ಇದೀಗ ‘KD’ ಲೋಕಕ್ಕೆ ನಟ ರಮೇಶ್ ಅರವಿಂದ್ ವಿಭಿನ್ನ ಲುಕ್‌ನಲ್ಲಿ ಪ್ರವೇಶ ನೀಡಿದ್ದಾರೆ.
ಚಿತ್ರದಲ್ಲಿ ಅವರು ‘ಧರ್ಮ’ನಾಗಿ ಕಾಣಿಸಿಕೊಳ್ಳಲಿದ್ದು, ಅವರ ಪಾತ್ರದ ಫಸ್ಟ್‌ಲುಕ್ ರಾಜ್ಯೋತ್ಸವದಂದು ಬಿಡುಗಡೆಯಾಗಿದೆ. ರಗಡ್ ಲುಕ್‌ನಲ್ಲಿ ಅವರಿಲ್ಲಿ ಕಾಣಿಸಿಕೊಂಡಿದ್ದಾರೆ. ‘ಕೆ.ವಿ.ಎನ್. ಪ್ರೊಡಕ್ಷನ್ಸ್ ಮತ್ತು ಪ್ರೇಮ್ ಅವರ ‘K.D’ ಚಿತ್ರದಲ್ಲಿ ‘ಧರ್ಮ’ ಪಾತ್ರದಲ್ಲಿ, ಅನೇಕ ಅದ್ಭುತ ಪ್ರತಿಭೆಗಳೊಂದಿಗೆ ಬೆಳ್ಳಿತೆರೆಯನ್ನು ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ’ ಎಂದಿದ್ದಾರೆ ರಮೇಶ್. ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ನಟಿ ಶಿಲ್ಪಾ ಶೆಟ್ಟಿ, ರವಿಚಂದ್ರನ್ ಬಣ್ಣಹಚ್ಚಿದ್ದಾರೆ.