ಕೆನಡಾ ಮೂಲದ ಖಲಿಸ್ತಾನಿ ಲಖ್ಬೀರ್ ಸಿಂಗ್ ಲಾಂಡಾ ಭಯೋತ್ಪಾದಕ ಎಂದು ಘೋಷಣೆ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆನಡಾ ಮೂಲದ ದರೋಡೆಕೋರ ಲಖ್ಬೀರ್ ಸಿಂಗ್ ಲಾಂಡಾನನ್ನ ಭಯೋತ್ಪಾದಕ ಎಂದು ಭಾರತದ ಕೇಂದ್ರ ಗೃಹ ಸಚಿವಾಲಯ ಘೋಷಿಸಿದ್ದು, ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.

ಮಾಹಿತಿ ಪ್ರಕಾರ, 1989ರಲ್ಲಿ ಪಂಜಾಬ್‌ನ ತರ್ನ್ ತರನ್ ಜಿಲ್ಲೆಯಲ್ಲಿ ಜನಿಸಿದ ಲಾಂಡಾ 2017ರಲ್ಲಿ ಕೆನಡಾಕ್ಕೆ ಪಲಾಯನ ಮಾಡಿದ. ಕೆಲ ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದು, ಖಲಿಸ್ತಾನಿ ಗ್ರೂಪ್ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ)ಗೆ ಸೇರಿದ್ದಾನೆ. 2021ರಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಇಂಟೆಲಿಜೆನ್ಸ್ ಮುಖ್ಯಕಚೇರಿ ಮೇಲೆ ರಾಕೆಟ್ ದಾಳಿಯ ಯೋಜನೆಯಲ್ಲಿ ಈತ ಭಾಗಿಯಾಗಿದ್ದನು ಎಂದು ವಿವರಿಸಲಾಗಿದೆ.

ಅಲ್ಲದೇ ಈತ ಪಾಕಿಸ್ತಾನ ಮೂಲದ ದರೋಡೆಕೋರ ಹರ್ವಿಂದರ್ ಸಿಂಗ್‌ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ. ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಘಟಕಗಳಿಗೆ ಸುಧಾರಿತ ಸ್ಫೋಟಕ ಸಾಧನಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನ ಪೂರೈಕೆ ಮಾಡುತ್ತಿದ್ದ.

ಪಂಜಾಬ್‌ನಲ್ಲಿ ಮಾತ್ರವಲ್ಲದೇ ದೇಶದ ಇತರ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಹಣ ಪೂರೈಕೆ ಮಾಡುತ್ತಿದ್ದ. ಹೀಗೆ ಸಾಕಷ್ಟು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿರುವ ಲಾಂಡಾ, ಕೆನಡಾ ಮೂಲದ ಹಲವಾರು ಖಲಿಸ್ತಾನಿ ಭಯೋತ್ಪಾದಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ. ಸಿಖ್ಸ್ ಫಾರ್ ಜಸ್ಟಿಸ್‌ನ ಗುರುಪತ್‌ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್)ನ ಮೃತ ಹರ್ದೀಪ್ ಸಿಂಗ್ ನಿಜ್ಜರ್ ಜೊತೆಗೂ ಸಂಪರ್ಕ ಬೆಳೆಸಿದ್ದ ಎಂದು ಗೃಹ ಸಚಿವಾಲಯ ತಿಳಿಸಿದೆ.

Font Awesome Icons

Leave a Reply

Your email address will not be published. Required fields are marked *