ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಸಚಿವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಅನೇಕ ಕಾಂಗ್ರೆಸ್ ಮುಖಂಡರು ಪಾಲ್ಗೊಂಡು ಕೇಂದ್ರ ಸಚಿವ ಜೋಶಿ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೇ ಜೋಶಿ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.