ಕೇಜಿವಾಲ್‌ ಬಂಧನ ವಿರೋಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಮಾಡಿದ್ದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಮ್ ಆದ್ಮ ಪಕ್ಷದಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಪ್ರತಿಭಟನೆ ರ್ಯಾಲಿ ಮೂಲಕ ಆಗಮಿಸಿದ ಕಾರ್ಯಕರ್ತರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಬಕಾರಿ ನೀತಿ ಪ್ರಕರಣ ಸಂಬಂಧ ಇ.ಡಿ ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇವರ ಬಂಧನ ಖಂಡನೀಯವಾಗಿದೆ ಎಂದು ಎಎಪಿ ಇಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Font Awesome Icons

Leave a Reply

Your email address will not be published. Required fields are marked *