ಕೇಜ್ರಿವಾಲ್‌ಗೆ ಬಿಗ್ ಶಾಕ್; ದೆಹಲಿ ಕೋರ್ಟ್ ಮಹತ್ವದ ಆದೇಶ

ದೆಹಲಿ: ಬಹುಕೋಟಿ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.  ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದಲ್ಲೇ ಮೊದಲ ಬಾರಿಗೆ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯನ್ನ ಬಂಧಿಸಿದ್ದರು. ಇದೀಗ ಸಿಎಂ ಕೇಜ್ರಿವಾಲ್ ಅವರನ್ನ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧದ ಗಂಭೀರ ಆರೋಪದ ಬಗ್ಗೆ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್‌ 28ರ ತನಕ ಇಡಿ ವಶಕ್ಕೆ ನೀಡಲಾಗಿದೆ. ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಸತತ 3 ಗಂಟೆಗಳ ಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಬಳಿಕ ತೀರ್ಪು ಕಾಯ್ದಿರಿಸಿತ್ತು.

3 ಗಂಟೆಗಳ ಬಳಿಕ ಮಹತ್ವದ ತೀರ್ಪು ನೀಡಿರುವ ಕೋರ್ಟ್ ಮಾರ್ಚ್ 28ರವರೆಗೆ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಂಗ ಬಂಧನ ನೀಡಿ ಆದೇಶ ನೀಡಿದೆ.

Font Awesome Icons

Leave a Reply

Your email address will not be published. Required fields are marked *