ಬೆಂಗಳೂರು, ನವೆಂಬರ್ 26, 2023 (www.justkannada.in): ಕೊಚ್ಚಿ ವಿಶ್ವವಿದ್ಯಾನಿಲಯದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಖ್ಯಾತ ಗಾಯಕಿ ನಿಕಿತಾ ಗಾಂಧಿ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ತೆರೆದ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನೀಡುವ ಮೊದಲು ಕಾಲ್ತುಳಿತ ಸಂಭವಿಸಿದೆ.
ಈ ಬಗ್ಗೆ ತನಿಖೆಗೆ ಕೇರಳ ಸರ್ಕಾರ ಶನಿವಾರ ಆದೇಶಿಸಿದೆ. ಉನ್ನತ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಮತ್ತು ಕೊಚ್ಚಿನ್ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅವರನ್ನು ಒಳಗೊಂಡ ಮೂವರು ಸದಸ್ಯರ ತಂಡ ಪ್ರಕರಣದ ಕುರಿತು ತನಿಖೆ ನಡೆಸಲಿದೆ.
ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಂದಹಾಗೆ ದುರಂತ ಸಂಭವಿಸಿದಾಗ ಗಾಯಕಿ ತನ್ನ ಪ್ರದರ್ಶನವನ್ನು ಪ್ರಾರಂಭಿಸಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
Also Read : pancake recipe रेस्टोरेंट स्टाइल में इमेज के साथ