ಬೆಂಗಳೂರು,ಮಾರ್ಚ್,19,2024(www.justkannada.in): ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕ ಮುಕೇಶ್ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹಿಂದೂ ಕಾರ್ಯಕರ್ತರು ಹನುಮಾನ್ ಚಾಲೀಸಾ ಮೆರವಣಿಗೆ ನಡೆಸಿದ್ದು ಇದಕ್ಕೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.
ಈ ನಡುವೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕೋಮುದ್ವೇಷ ಬಿತ್ತಲು ಬಿಜೆಪಿನಾಯಕತರು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ದ ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಗರತ್ ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕ ಮುಕೇಶ್ ಮೇಲೆ ಮುಸ್ಲೀಂ ಯುವಕರು ಹಲ್ಲೆ ಮಾಡಿದ ಹಿನ್ನೆಲೆ ಇಂದು ನಗರ್ತಪೇಟೆಯಲ್ಲಿ ಹಿಂದೂ ಕಾರ್ಯಕರ್ತರು ಹನುಮಾನ್ ಚಾಲೀಸಾ ಮೆರವಣಿಗೆ ಹಮ್ಮಿಕೊಂಡಿದ್ದರು. ಇದಕ್ಕೆ ಪೊಲೀಸರ ಅನುಮತಿ ಇರಲಿಲ್ಲ ಎನ್ನಲಾಗಿದೆ.
ಹೀಗಾಗಿ ಹಿಂದೂ ಕಾರ್ಯಕರ್ತರನ್ನ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದು ಈ ವೇಳೆ ಸ್ಥಳಕ್ಕಾಗಮಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರತಿಭಟನೆ ನಡೆಸಿದ್ದರು. ನಂತರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ ಸಹ ಸಾಥ್ ನೀಡಿ ಧರಣಿ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾನೂನು ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೋಮುದ್ವೇಷ ಬಿತ್ತಲು ಬಿಜೆಪಿ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಧಾರ್ಮಿಕ ಭಾವನೆ ಕೆರಳಿಸುತ್ತಿದ್ದಾರೆ. ಹೀಗಾಗಿ ತೇಜಸ್ವಿ ಸೂರ್ಯ ವಿರುದ್ದ ಕ್ರಮಕೈಗೊಳ್ಳಿ ಎಂದು ದೂರು ನೀಡಿದೆ ಎನ್ನಲಾಗಿದೆ.
Key words: Allegation -trying – communal hatred- Complaint –against- MP- Tejaswi Surya.