‘ಕ್ಯಾಪ್ಟನ್ ಮಿಲ್ಲರ್​’ ಟ್ರೇಲರ್ ರಿಲೀಸ್: ಶಿವಣ್ಣ ಮಾಸ್ ಎಂಟ್ರಿ

ನಟ ಧನುಷ್ ಅವರಿಗೆ ಇಂದು (ಜುಲೈ 28) ಬರ್ತ್​ಡೇ ಸಂಭ್ರಮ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಫ್ಯಾನ್ಸ್ ಹಬ್ಬ ಮಾಡುತ್ತಿದ್ದಾರೆ. ಬರ್ತ್​ಡೇ ಪ್ರಯುಕ್ತ ಅವರ ಮುಂದಿನ ಸಿನಿಮಾ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಸ್ವಾತಂತ್ರ್ಯ ಪೂರ್ವದ ಕಥೆಯನ್ನು ಈ ಚಿತ್ರ ಹೊಂದಿದ್ದು, ಟೀಸರ್ ಸಾಕಷ್ಟು ಅದ್ಬುತವಾಗಿ ಮೂಡಿ ಬಂದಿದೆ. ಶಿವರಾಜ್​ಕುಮಾರ್ ನಟಿಸಿದ್ದಾರೆ ಎಂಬ ಕಾರಣಕ್ಕೆ ಕನ್ನಡಿಗರಿಗೂ ಈ ಸಿನಿಮಾ ಮೇಲೆ ನಿರೀಕ್ಷೆ ಸೃಷ್ಟಿ ಆಗಿದೆ. ಡಿಸೆಂಬರ್ 15ರಂದು ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ.

ಬ್ರಿಟಿಷರ ವಿರುದ್ಧ ಹೋರಾಡುವ ವ್ಯಕ್ತಿಯಾಗಿ ಧನುಷ್ ಕಾಣಿಸಿಕೊಂಡಿದ್ದಾರೆ. ಶಿವಣ್ಣ ಅವರು ಕುದುರೆ ಏರಿ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅರುಣ್ ಮಾದೇಶ್ವರನ್ ಅವರು ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಜಿವಿ ಪ್ರಕಾಶ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಧನುಷ್, ಶಿವರಾಜ್​ಕುಮಾರ್ ಜೊತೆ ಸಂದೀಪ್ ಕಿಶನ್, ಪ್ರಿಯಾಂಕಾ ಮೋಹನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *