ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ.

ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು.

ವಿದ್ಯಾರ್ಥಿನಿ ದಪ್ಪ ಇರುವುದರಿಂದ ಕುಟುಂಬಸ್ಥರು ಕೂಡ ಆಕೆಯ ದೇಹದಲ್ಲಿ ಆಗುತ್ತಿರುವ ಬದಲಾವಣೆ ಕಂಡು ಹಿಡಿಯುವ ಪ್ರಯತ್ನ ಮಾಡಿಲ್ಲ. ಆದರೆ ಡಿಸೆಂಬರ್‌ 24 ರಂದು ಶಾಲೆಯಲ್ಲಿ ಇದ್ದಾಗ ಆಕೆಗೆ ಜೋರಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಶಿಕ್ಷಕರಿಗೆ ಹೇಳಿ ಆಕೆ ಸಂಬಂಧಿಕರ ಮನೆಗೆ ತೆರಳಿದ್ದಾಳೆ. ನಂತರ ಸಂಬಂಧಿಕರು‌ ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ‌ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು.

ಚಿಕತ್ಸೆಗೆ ದಾಖಲು ಮಾಡುತ್ತಿದ್ದಂತೆಯೇ ಆಕೆ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾಳೆ. ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ಕೊಟ್ಟಿರುವ ವಿಚಾರ ಗೊತ್ತಾಗ್ತಿದ್ದಂತೆ ಕುಟುಂಬಸ್ಥರು ಕೂಡ ಶಾಕ್‌ ಆಗಿದ್ದಾರೆ.

ಮಹಾರಾಷ್ಟ್ರ ಪೊಲೀಸರು ನಿಂಬರ್ಗಾ ಪೊಲೀಸರನ್ನು ಸಂಪರ್ಕ ಮಾಡಿ ನಿಂಬರ್ಗಾ ಪೊಲೀಸರು ವಿದ್ಯಾರ್ಥಿನಿಯ ವಿಚಾರಣೆ ನಡೆಸಿದರು. ಈ ವೇಳೆ ಅಣ್ಣನಿಂದ ಕೃತ್ಯ ಆಗಿರುವುದು ಬಯಲಾಗಿದೆ.

ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲು ಮಾಡಲಾಯಿತು.

Font Awesome Icons

Leave a Reply

Your email address will not be published. Required fields are marked *